ಮಂಜಿನ ಹನಿಯಲ್ಲಿ ಒಮ್ಮೆ ಮಿಂದು ಹೋದುವರು

Sunday, 24 November 2013

ನಾಮಕರಣಕ್ಕೊಂದು ಹೆಸರು!


ಪ್ರೀತಿಗೆ ಹೆಸರು
ಬರೆದಿದ್ದೇನೆ,
ಶ್ವಾಸ ತುಂಬಿ
ಉಫ್ಫೆಂದು
ಊದೇ ಗೆಳತಿ,
ಹೃದಯ ಬಡಿಯಬೇಕಿದೆ!

ಕಣ್ಣ ಕಣ್ಣೊಳಿಟ್ಟು
ನೋಡೇ ಗೆಳತಿ,
ಅಸ್ಪಷ್ಟ ಚಿತ್ರಗಳು
ಸುಸ್ಪಷ್ಟವಾಗಿ
ಮೂಡಿಕೊಳ್ಳಲಿ
ಕಣ್ಣುಕೂಡಿ ಕುಣಿಯಬೇಕಿದೆ!

ಒಮ್ಮೆ ಸ್ಪರ್ಷಿಸು
ಮಗಧೀರನನ್ನು
ಮೀರಿಸುವ
ಪ್ರೇಮಿಯಾಗಿ,
ಜನ್ಮಜನ್ಮಾಂತರಕೂ
ಕಾದು ಕೂರಬೇಕಿದೆ!

ನಿನ್ನ ಹೆಸರ
ಎದೆಯ ಮೇಲೆ
ಕೆತ್ತಿ ಹೋಗು,
ನನ್ನ ಪ್ರೀತಿಯ
ನಾಮಕರಣಕ್ಕೆ
ನಿನ್ನ ಮೊಹರು ಬೇಕಿದೆ!

- ಪ್ರಸಾದ್.ಡಿ.ವಿ.

’ಟೈಂ ಪಾಸ್ ಕವಿತೆ’  ಸುಮ್ನೆ ಓದಿಬಿಡಿ!
ಚಿತ್ರಕೃಪೆ: ಗೂಗಲ್ ಅಂತರ್ಜಾಲ

1 comment:

  1. ಸ್ವತಃ ಆಕೆಗೇ ಪ್ರೇಮಿಯನ್ನು ರೂಪಿಸುವ ಅಧಿಕಾರ ಕೊಡುವ ಮನಸ್ಥಿತಿಗೆ ನಾನು ಶರಣಾದೆ.

    ReplyDelete