ಮಧುಶಾಲೆಯ
ಮೂಲೆಕೊನೆಯ ಟೇಬಲ್ಲೊಂದರಲಿ
ಕುಡಿದು ಬಿದ್ದವನು
ಸತ್ತುಹೋಗಿ ವರ್ಷಗಳೇ ಕಳೆದಿವೆ,
ಕುಯ್ಯದೆ, ಕತ್ತರಿಸದೆ
ಅವನ ಹೃದಯದ ಬಿಸಿರಕ್ತ ಕುಡಿದ
ನಿನ್ನ ಕಣ್ಣೋಟಗಳಿಗೆ
ತೃಪ್ತಿಯಾಗಿರಬಹುದಲ್ಲವೇ ಹುಡುಗಿ?
ನಿನಗೆ ನೆನಪಿರಬಹುದು, ಇಲ್ಲದೆಯೂ ಇರಬಹುದು!
ಎದುರು ಸಿಕ್ಕರೂ ಪರಿಚಯದ ನಗೆ ನಕ್ಕು
ಕೊಂದೇ ಬಿಡಬೇಡ ಪಾಪ,
ಅವನ ಸ್ಮೃತಿ, ವಿಸ್ಮೃತಿಯ ಪ್ರಜ್ಞೆಗಳೆಲ್ಲ
ನೀ ಬಿಟ್ಟು ಹೋದಷ್ಟೇ ಹಿಂದಿನವು,
ಹೆಸರು ಕರೆದಾನು ಜೋಕೆ?!
ತಲೆ ತಪ್ಪಿಸಿಕೊಂಡೋಡಿ ಬಿಡು,
ನಿನಗೆಂದೇ ಇಟ್ಟು ಕರೆದ ಹೆಸರುಗಳನ್ನು
ಕರೆದರಂತೂ,
ನಿನ್ನ ಕೊಂದ ಪಾಪ ತಟ್ಟುತ್ತದೆ,
ಮೊದಲೇ ಪ್ರೇಮಿಸಿ ಪಾಪಿಯಾಗಿದ್ದಾನೆ,
ಉಸಿರಾಡಿಕೊಂಡಿರಲಿ ಬಿಡು!
ಸದ್ದುಗಳಬ್ಬರದ ಸಂತೆಯಲಿ
ಕಳೆದುಹೋಗುವ ಒಂಟಿಪಯಣಿಗನಿಗೆ
ಶುದ್ಧ ಮೌನವೆಂದರೆ ತೀರದ ಅಸಹ್ಯ!
ನಿನ್ನ ನೆನಪುಗಳಾವಳಿಯಲಿ
ಶುದ್ಧ ಪಾಪಿಯಾಗುವವನು,
ನಕ್ಕಾಗ ಮುದ್ದು ಪಾಪುವಾಗುತ್ತಾನೆ,
ನೀನಿಟ್ಟ ಆಣೆ, ಪ್ರಮಾಣಗಳನು
ಮರೆತಂತೆ ಮಾಡಿ ಕ್ಷಮಿಸುವಾಗ
ನೋವುಗಳನು ನುಂಗಿ ನಡೆದ
ಬುದ್ಧನಾಗುತ್ತಾನೆ,
ಆದರೆ ವಿಪರ್ಯಾಸ ನೋಡು,
ಕಂಡವರಿಗೆ ಕುಡುಕನಾಗಿದ್ದಾನೆ,
ಬರಿಯ ಕುಡುಕನಾಗಿದ್ದಾನೆ!
--> ಮಂಜಿನ ಹನಿ
ಚಿತ್ರಕೃಪೆ: ಗೂಗಲ್ ಅಂತರ್ಜಾಲ
ಮಧು ಶಾಲೆಯಲಿ ಕೆದಕಿದರೆ ಸಾವಿರ ಮನ ಕಲುಕುವ ಕಥನಗಳು ತೆರೆದುಕೊಳ್ಳುತ್ತವೆ.
ReplyDeleteಗಾಢವಾಗಿ ಪರಿಣಾಮ ಬೀರುವ ಕವನ ಕಟ್ಟಿಕೊಟ್ಟಿದ್ದೀರಿ.
The best out of best:
'ನಿನ್ನ ನೆನಪುಗಳಾವಳಿಯಲಿ
ಶುದ್ಧ ಪಾಪಿಯಾಗುವವನು,
ನಕ್ಕಾಗ ಮುದ್ದು ಪಾಪುವಾಗುತ್ತಾನೆ'
ishtavaaythu prasad :) manjina hanigaLe houdu........
ReplyDeleteಆ ವಯಸ್ಸು ಅಂತಹದು. ಇಂತಹ ಉತ್ಕಟತೆ ಹುಟ್ಟಿಸಿ ಬಾಳಿನ ನಿಜಸಾರ ಮಸುಕಾಗಿಸಿಬಿಡುತ್ತದೆ.
ReplyDeleteElla ondu saari life alli paapigalu agthare...nice
ReplyDelete